ಚಿಕ್ಕಮಗಳೂರು | ಅಂಗಡಿಗೆ ಗುದ್ದಿದ ಬಸ್: ವಿದ್ಯಾರ್ಥಿನಿ ಮೃತ್ಯು

Prasthutha|

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ದುಗ್ಲಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಬಸ್ ಗೆ ಕಾಯುತ್ತಿದ್ದ ಐವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

- Advertisement -


ತುಳಸಿ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ನಿವೇದಿತ (14) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.


ವೇಗದ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.

Join Whatsapp