ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿನಿಯ ಮೃತ ದೇಹ ಪತ್ತೆ

Prasthutha|

ಚಿಕ್ಕಮಗಳೂರು: ಶಾಲೆ ಮುಗಿಸಿ ಬರುವಾಗ ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ವಿದ್ಯಾರ್ಥಿನಿಯ ಮೃತ ದೇಹವನ್ನು ಪತ್ತೆಹಚ್ಚಲಾಗಿದೆ.

- Advertisement -

ಹೊಸಪೇಟೆ ಕಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿರುವ ಸುಪ್ರಿಯಾ (7) ಶಾಲೆ ಮುಗಿಸಿ ಬರುವಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದಳು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬಾಲಕಿಗಾಗಿ ಶೋಧ ಕಾರ್ಯಾಚರಣೆ ನಡೆಸಿತ್ತು. ನಂತರ ಆಗಮಿಸಿದ ಹೆಚ್ಚುವರಿ SDRF ತಂಡ ಸತತ 40 ಗಂಟೆಗಳ ಶೋಧ ಕಾರ್ಯಾಚರಣೆಯ ನಂತರ ಮೃತದೇಹವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.



Join Whatsapp