ಚಿಕ್ಕಮಗಳೂರು: ಮೂರು ದಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

Prasthutha|

ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ.

- Advertisement -


ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಎಸ್ಪಿ ವಿಕ್ರಂ ಅಮಟೆ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನವೆಂಬರ್ 4ರಿಂದ 6ರವರೆಗೂ ಚಂದ್ರದ್ರೋಣ ಪವರ್ತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರನ್ನ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ವಿಧಿಸಿದೆ.

Join Whatsapp