Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ರಸ್ತೆ ಬದಿ ಆಶ್ರಯ ಪಡೆದಿದ್ದವರ ಮೇಲೆ ಕಾಡಾನೆ ದಾಳಿ

ಚಿಕ್ಕಮಗಳೂರು: ರಸ್ತೆ ಬದಿ ಆಶ್ರಯ ಪಡೆದಿದ್ದವರ ಮೇಲೆ ಕಾಡಾನೆ ದಾಳಿ

ಮೂಡಿಗೆರೆ: ರಸ್ತೆ ಬದಿ ಆಶ್ರಯ ಪಡೆದಿದ್ದವರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ.

ದಾಳಿಗೊಳಗಾದವರನ್ನು ನಾಗವಲ್ಲಿ ಹಾಗೂ ಗಂಡುಗುಸೆ ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕೆಂದು ಹಾಸನ ಜಿಲ್ಲೆಯ ಹಗರೆಯಿಂದ ಬಂದಿದ್ದ ದಂಪತಿ, ರಾತ್ರಿ ಬಣಕಲ್ ನ ಪಶು ಆಸ್ಪತ್ರೆ ಬಳಿ ಮಲಗಿದ್ದಾಗ ಕಾಡಾನೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಕ್ಷಣವೇ ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು, ಕಾಡಾನೆ ಹಾವಳಿ ನಿಯಂತ್ರಣ ಮಾಡದ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮಗಳಿಗೆ ಬಂದು ಜೀವ ಭಯ ಸೃಷ್ಟಿಸುತ್ತಿರುವ ಕಾಡಾನೆಗಳ ಸ್ಥಳಾಂತರಕ್ಕೆ ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version