ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ಕೆಎಫ್ ಡಿ ಸೋಂಕಿಗೆ ಮತ್ತೊಂದು ಬಲಿಯಾಗಿದೆ.
ಕೂಲಿ ಕಾರ್ಮಿಕ ಮಹಿಳೆ (ಕೊಟ್ರಮ್ಮ (43) ಮಂಗನ ಕಾಯಿಲೆಗೆ ಮೃತಪಟ್ಟಿದ್ದಾರೆ. ಕೊಪ್ಪ ತಾಲೂಕಿನ ನುಗ್ಗಿ ಗ್ರಾ.ಪಂ. ವ್ಯಾಪ್ತಿಯ ದೇವಗನ್ ಎಸ್ಟೇಟ್ ಮಹಿಳೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.