ಚಿಕ್ಕಮಗಳೂರು: ಗುಂಡೇಟಿನಿಂದ ಯುವಕ ಸಾವು

Prasthutha|

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.

- Advertisement -

ತಾಲ್ಲೂಕಿನ ಕೆರೆಮಕ್ಕಿ ಗ್ರಾಮದ ಯುವಕ ಸಂಜು(33) ಮೃತ ಯುವಕ.

ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದೆ.

- Advertisement -

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ಇದು ಆಕಸ್ಮಿಕವಾಗಿ ಗುಂಡು ತಗುಲಿ ಆಗಿರುವ ಸಾವೇ ಅಥವಾ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆಯೇ ? ಈ ಬಗ್ಗೆ ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ‌ ನಿರೀಕ್ಷಿಸಲಾಗಿದೆ.

ಮೃತ ಸಂಜು ಕೆರೆಮಕ್ಕಿ ಗ್ರಾಮದ ದಿವಂಗತ ಜೂಲೇಗೌಡ ಎಂಬುವವರ ಪುತ್ರ. ಅವಿವಾಹಿತನಾಗಿದ್ದು, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



Join Whatsapp