ಶೃಂಗೇರಿ: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ತುಂಬಾ ನದಿಯಲ್ಲಿ ಈಜುವಾಗ ಮುಳುಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಶೃಂಗೇರಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಜಿಗಣಿ ಕೃಷ್ಣ ಕಾಲೇಜಿನ ಚಂದನ್ ಎಂದು ಗುರುತಿಸಲಾಗಿದ್ದು, ಶೃಂಗೇರಿ ಶಾರದಾಂಬೆ ದೇವಸ್ಥಾನದ ಪಕ್ಕದಲ್ಲೇ ಈಜುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.