ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದ.ಕ. ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಗ್ರಹಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ನಿವಾಸಿಗಳ ಪುಟ್ಟ ಹೆಣ್ಣು ಮಗು ಒಂದು ಸಾವನ್ನಪ್ಪಿದ ಘಟನೆ ಆಗಸ್ಟ್ 8ರಂದು ಮಂಗಳವಾರ ನಡೆದಿದೆ. ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯಿಂದ ಈ ಘಟನೆ ನಡೆದಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.
ತಪ್ಪಿತಸ್ಥ ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಮಗುವಿನ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರವನ್ನು ಒದಗಿಸಬೇಕು. ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಮೂಲ ಸೌಕರ್ಯ ಅಭಿವೃದ್ಧಿಗೊಳಿಸಬೇಕು ಎಂದು ಈ ಮೂಲಕ ಮಾನ್ಯ ಆರೋಗ್ಯ ಸಚಿವರಿಗೆ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಅಕ್ಬರ್ ಬೆಳ್ತಂಗಡಿ ಒತ್ತಾಯಿಸಿದ್ದಾರೆ