ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಗು ಸ್ಥಳದಲ್ಲೇ ಮೃತ್ಯು

Prasthutha|

ಹೈದರಾಬಾದ್​: ಅಪಾರ್ಟ್​ಮೆಂಟ್​ವೊಂದರ ಪಾರ್ಕಿಂಗ್ ​ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ್ದು, ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

 ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು ತನ್ನ ಎರಡು ವರ್ಷದ ಮಗಳನ್ನು ಪಾರ್ಕಿಂಗ್ ಸ್ಥಳದಲ್ಲಿ ಮಲಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯನ್ನು ಗಮನಿಸದೆ ಕಾರನ್ನು ಚಲಾಯಿಸಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.

- Advertisement -

ಕಾರು ಅಬಕಾರಿ ಸಬ್‌ಇನ್‌ಸ್ಪೆಕ್ಟರ್‌ಗೆ ಸೇರಿದ್ದು, ಆಕೆಯ ಪತಿ ಕಾರು ಚಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಬಾಲಕಿ ನಗರದಲ್ಲಿ ಕೂಲಿ ಕೆಲಸ ಮಾಡಲು ಬಂದ ಮಹಿಳೆಯೊಬ್ಬರ ಮಗಳಾಗಿದ್ದು, ಬಿಸಿಲು ತಪ್ಪಿಸಲು ವಾಹನ ನಿಲುಗಡೆ ಸ್ಥಳದಲ್ಲಿ ಮಲಗಿದ್ದಾಳೆ.

ಬಿಳಿ ಬಣ್ಣದ ಎಸ್‌ಯುವಿ ಅಲ್ಲಿಗೆ ಬಂದು ಮಗುವಿನ ಮೇಲೆ ಚಲಿಸುತ್ತದೆ. ಚಾಲಕ ತಕ್ಷಣವೇ ಏನೋ ಆಗಿದೆ ಎಂದು ಅರಿತು ಕಾರನ್ನು ಹಿಂದಕ್ಕೆ ತೆಗೆದುಕೊಂಡಿದ್ದಾನೆ.  ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

- Advertisement -