ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ದೈಹಿಕ ಶಿಕ್ಷಕ ಸೆರೆ

Prasthutha|

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ನಾಲ್ವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಸಂಬಂಧ ದೈಹಿಕ ಶಿಕ್ಷಕನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.

- Advertisement -

ದೈಹಿಕ ಶಿಕ್ಷಕ ಆಂಜಿನಪ್ಪ (50) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯು ಶಾಲೆಯಲ್ಲಿ ನಾಲ್ವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಹೆಬ್ಬಾಳ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp