Home ಟಾಪ್ ಸುದ್ದಿಗಳು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ದೈಹಿಕ ಶಿಕ್ಷಕ ಸೆರೆ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ದೈಹಿಕ ಶಿಕ್ಷಕ ಸೆರೆ

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ನಾಲ್ವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಸಂಬಂಧ ದೈಹಿಕ ಶಿಕ್ಷಕನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.

ದೈಹಿಕ ಶಿಕ್ಷಕ ಆಂಜಿನಪ್ಪ (50) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯು ಶಾಲೆಯಲ್ಲಿ ನಾಲ್ವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಹೆಬ್ಬಾಳ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp
Exit mobile version