ಸರಕಾರಿ ಆಸ್ಪತ್ರೆಯಲ್ಲೊಂದು ಘೋರ ಕೃತ್ಯ!
ಚಿಂತಾಮಣಿ: ನವಜಾತ ಶಿಶುವನ್ನು ಹೆತ್ತ ತಾಯಿಯೇ ನೇಣುಬಿಗಿದು ಶೌಚಾಲಯದ ಕಿಟಕಿಗೆ ಕಟ್ಟಿ ಹತ್ಯೆಗೈದಿರುವ ಘೋರ ಕೃತ್ಯ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಶೌಚಾಲಯ ಸ್ವಚ್ಚಗೊಳಿಸಲು ಬಂದ ಸಿಬ್ಬಂದಿಗೆ ನವಜಾತ ಶಿಶು ಕಿಟಕಿಯಲ್ಲಿ ಕಂಡುಬಂದಿದೆ.ಸಿಬ್ಬಂದಿ ಕೂಡಲೇ ವಿಚಾರವನ್ನು ವೈದ್ಯರ ಗಮನಕ್ಕೆ ತಂದಿದ್ದು, ತಕ್ಷಣ ಆಕ್ಸಿಜನ್ ನೀಡಿ ಬದುಕಿಸಲು ಪ್ರಯತ್ನಿಸಿದರೂ ಮಗು ಅಷ್ಟರಲ್ಲೇ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಯ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿ ತನಿಖೆ ನಡೆಸುತ್ತಿದ್ದಾರೆ. ಹೆಣ್ಣು ಮಗು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆಂಬ ಆರೋಪ ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.