ಬೆಂಗಳೂರು: ಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು, ಅದಕ್ಕಾಗಿ 9.60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನ ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನ ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು