Home ಟಾಪ್ ಸುದ್ದಿಗಳು 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ: ಕೇಂದ್ರ ಸರ್ಕಾರ

5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್ ಮಾರ್ಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. 6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಪಾಲಕರ ನಿಗಾದಲ್ಲಿ ಮಾಸ್ಕ್ ಹಾಕಬೇಕು. 12ರಿಂದ 18 ವರ್ಷದ ಮಕ್ಕಳು ದೊಡ್ಡವರಂತೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ.
ಕೊರೋನಾ, ಓಮಿಕ್ರಾನ್ ಸೋಂಕು ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ ರೋಗ ನಿರೋಧಕ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಸಬಾರದು. ಸ್ಟಿರಾಯ್ಡ್ ಅನ್ನು ಬಳಸುವುದಾದರೂ ಅದು 10 ರಿಂದ 14 ದಿನಕ್ಕೆ ಸೀಮಿತವಾಗಿರಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಓಮಿಕ್ರಾನ್ ರೂಪಾಂತರ ತಳಿಯ ಕೋವಿಡ್ ಸೋಂಕು ಪ್ರಕರಣ ಏರಿಕೆಯ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯು ಗುರುವಾರ ಕೋವಿಡ್ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಇತರೆ ದೇಶಗಳಿಗೆ ಸಂಬಂಧಿಸಿದ ಅಂಕಿ ಅಂಶಗಳ ಪ್ರಕಾರ, ಓಮಿಕ್ರಾನ್ ಸೋಂಕಿನ ಪರಿಣಾಮ, ತೀವ್ರತೆ ಕಡಿಮೆ ಆಗಿದೆ. ಆದರೂ, ಪ್ರಸ್ತುತ ಏರಿಕೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವುದು ಅಗತ್ಯವಾಗಿದೆ ಎಂದು ಹೇಳಿದೆ.

Join Whatsapp
Exit mobile version