►ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮುಂದುವರಿದ ಘಟನೆ
ಮಡಿಕೇರಿ: ಶಿರವಸ್ತ್ರ ಧರಿಸಿ ಶಾಲೆಗೆ ಬಂದ 38 ವಿದ್ಯಾರ್ಥಿನಿಯರನ್ನು ಮೂರನೆಯ ದಿನವೂ ಶಾಲೆಗೆ ಪ್ರವೇಶ ನಿರಾಕರಿಸಲಾಗಿದೆ.
ಕುಶಾಲನಗರ ತಲ್ಲೂಕಿನ ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ 38 ವಿದ್ಯಾರ್ಥಿನಿಯರಿಗೆ ಶಾಲೆಯ ಪ್ರವೇಶ ನಿರ್ಬಂಧಿಸಲಾಗಿದೆ.
ಹೈಕೋರ್ಟ್ ಮಧ್ಯಂತರ ಆದೇಶ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಅನ್ವಯಿಸಲ್ಲ ಹಾಗಾಗಿ ನಮ್ಮ ಮಕ್ಕಳಿಗೆ ಶಾಲೆಗೆ ಅವಕಾಶ ಕಲ್ಪಿಸಬೇಕೆಂದು ಮುಖ್ಯೋಪಾಧ್ಯಾಯರಲ್ಲಿ ಮನವಿ ಮಾಡಿದರು.
ಹೈಕೋರ್ಟ್ ಆದೇಶದ ಪ್ರಕಾರ ಎಲ್ಲಾ ವಿದ್ಯಾಸಂಸ್ಥೆಗಳಿಗೂ ಅನ್ವಯಿಸುತ್ತದೆ. ಹಾಗಾಗಿ ಕಾನೂನನ್ನು ನಾವು ಪಾಲಿಸಬೇಕಾಗಿದೆ ಎಂದು ಮುಖ್ಯೋಪಾಧ್ಯಾಯರಾದ ಅನಿಲ್ ಮಾಹಿತಿ ನೀಡಿದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಚ್ಚಯ್ಯ ಮಾತನಾಡಿ, ಈ ಹಿಂದೆ ಮಕ್ಕಳು ಶಿರವಸ್ತ್ರ ಧರಿಸಿ ಶಾಲೆಗೆ ಬರುತ್ತಿದ್ದರು. ಇದೀಗ ನ್ಯಾಯಾಲಯದ ಆದೇಶವನ್ನು ನಾವು ಪಾಲಿಸಬೇಕಾಗಿದೆ. ನಾವು ಯಾರನ್ನೂ ಬಲಾತ್ಕಾರ ಮಾಡುತ್ತಿಲ್ಲ. ನ್ಯಾಯಾಲಯದ ಆದೇಶವನ್ನು ಪಾಲಿಸುವುದು ನಮ್ಮ ಧರ್ಮ ಎಂದರು.