ನವದೆಹಲಿ: ಉತ್ತರ ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಯ ಉಲ್ಬಣ ಕುರಿತ ವರದಿಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯದ ಸನ್ನದ್ಧತೆಯನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸಲಹೆ ನೀಡಿದೆ.
ಉಸಿರಾಟದ ಕಾಯಿಲೆಗಳ ಬಗ್ಗೆ ಪೂರ್ವಸಿದ್ಧತಾ ಕ್ರಮಗಳನ್ನು ಪೂರ್ವಭಾವಿಯಾಗಿ ಪರಿಶೀಲಿಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.