ನವದೆಹಲಿ: ಲಡಾಖ್ ನಲ್ಲಿರುವ ಭಾರತದ ಭೂಪ್ರದೇಶದ ಮೇಲೆ ಚೀನಾ ಆಕ್ರಮಣ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದು, ”ಚೀನಾದ ತನ್ನ ಇತ್ತೀಚಿನ ಆವೃತ್ತಿಯ ‘ಸ್ಟ್ಯಾಂಡರ್ಡ್ ಮ್ಯಾಪ್’ನಲ್ಲಿ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಸೇರಿದೆ. ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದೆ” ಎಂದು ಹೇಳಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಪ್ರಧಾನಿ ಮೋದಿ ಅವರು, ಒಂದು ಇಂಚು ಭೂಮಿಯನ್ನು ಆಕ್ರಮಿಸಿಲ್ಲ ಎಂದು ಹೇಳುತ್ತಾರೆ. ಅದು ಸಂಪೂರ್ಣ ಸುಳ್ಳು ಆಗಿದೆ. ಚೀನಾ ಭಾರತೀಯ ಭೂಮಿಯ ಮೇಲೆ ಒಳನುಗ್ಗಿರುವುದು ತಿಳಿದಿದೆ” ಎಂದು ಕಾಂಗ್ರೆಸ್ ನಾಯಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.