ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ವಜಾ

Prasthutha|

ಬೀಜಿಂಗ್: ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ಅವರನ್ನು ಚೀನಾ ಸರ್ಕಾರ ತೆಗೆದುಹಾಕಿದೆ. ಇದಕ್ಕೆ ಯಾವುದೇ ವಿವರಣೆಯನ್ನು ನೀಡಲಾಗಿಲ್ಲ. ಚೀನಾ ರಾಜ್ಯ ಪ್ರಸಾರಕ ಸಿಸಿಟಿವಿ ವರದಿ ಮಾಡಿದ್ದು, ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಸಚಿವರನ್ನು ಸರಕಾರ ವಜಾ ಮಾಡಿದೆ ಎಂದಿದೆ.

- Advertisement -

ಯಾವುದೇ ವಿವರಣೆಯನ್ನು ನೀಡದೆ ಜುಲೈನಲ್ಲಿ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ಮಾಜಿ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಬಳಿಕ  ಅದೇ ರೀತಿಯ ಕ್ರಮ ಎದುರಿಸಿದ ಎರಡನೇ ವ್ಯಕ್ತಿ ಲಿ ಅವರಾಗಿದ್ದಾರೆ.

ಮಾರ್ಚ್‌ನಲ್ಲಿ ಕ್ಯಾಬಿನೆಟ್ ಪುನರ್ರಚನೆಯ ಸಮಯದಲ್ಲಿ ರಕ್ಷಣಾ ಸಚಿವ ಆದ ಲಿ  ಆಗಸ್ಟ್ 29 ರಂದು ಭಾಷಣವೊಂದನ್ನು ಮಾಡಿದ ನಂತರ ಜನರ ಜೊತೆ ಕಾಣಿಸಿಕೊಂಡಿರಲಿಲ್ಲ. ಆವರು ಕಾಣೆಯಾಗಿರುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ಅವರ ಎಲ್ಲಿದ್ದಾರೆ ಏನ್‌ ಮಾಡ್ತಿದಾರೆ ಅಂತ ತಿಳುದು ಬಂದಿರಲಿಲ್ಲ.ಅಧ್ಯಕ್ಷ ಮತ್ತು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ನಾಯಕ ಕ್ಸಿ ಜಿನ್‌ಪಿಂಗ್ ಅವರ ಅಧಿಕಾರ ಮುಂದುವರಿಯುವ ಬಗ್ಗೆ ಪ್ರಶ್ನೆಗಳನ್ನು ಲಿ ಎತ್ತಿದ್ದರು. ಅಪಾರ ದೇಶ ನಿಷ್ಠೆ ತೋರುತ್ತಿದ್ದ ಆವರು ಸಾರ್ವಜನಿಕ ಮತ್ತು ಖಾಸಗಿ ಭ್ರಷ್ಟಾಚಾರದ ವಿರುದ್ಧ ಪಟ್ಟುಬಿಡದೆ ದನಿ ಎತ್ತುತ್ತಿದ್ದರು.

- Advertisement -

ಇದು ಜಿನ್‌ಪಿಂಗ್ ಅವರಿಗೆ ಮುಜುಗರ ತರುತ್ತಿತ್ತು. ರಾಜಕೀಯ ಪ್ರತಿಸ್ಪರ್ಧಿಗಳನ್ನು ಮಟ್ಟ ಹಾಕಬೇಕು, ಹದಗೆಡುತ್ತಿರುವ ಆರ್ಥಿಕತೆಯ ನಡುವೆ ಅಮೆರಿಕಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ತಮ್ಮ ಮಾತು ಕೇಳುವವರನ್ನು ಆ ಸ್ಥಾನಕ್ಕೆ ತರಬೇಕೆಂಬುದು ಅಧ್ಯಕ್ಷ ಜಿನ್‌ಪಿಂಗ್ ಯೋಚಿಸುತ್ತಿದ್ದರು ಎನ್ನಲಾಗಿದೆ.

Join Whatsapp