ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸ್ಫೋಟ| ಇಬ್ಬರಿಗೆ ಜೀವಾವಧಿ ಶಿಕ್ಷೆ

Prasthutha|

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ 2010ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ವಿಧಿಸಿದ್ದ 7 ವರ್ಷಗಳ ಶಿಕ್ಷೆಯನ್ನು ಪರಿಶೀಲಿಸಿರುವ ಇಲ್ಲಿನ ವಿಶೇಷ ನ್ಯಾಯಾಲಯ, ಇದೀಗ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

- Advertisement -

ಇಂಡಿಯನ್ ಮುಜಾಹಿದೀನ್ ಸಂಘಟನೆ ಸದಸ್ಯರೆನ್ನಲಾಗಿದ್ದ ಅಫ್ತಾಬ್ ಆಲಂ ಅಲಿಯಾಸ್ ಫಾರೂಕ್ ಹಾಗೂ ಅಹಮ್ಮದ್ ಜಮಾಲ್ ಎಂಬುವರನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಇಬ್ಬರಿಗೂ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದೇಶವನ್ನು ಪ್ರಶ್ನಿಸಿದ್ದ ಸಿಸಿಬಿ ಪರ ವಕೀಲರು, ಕೃತ್ಯದ ಬಗ್ಗೆ ದಾಖಲಾಗಿರುವ ಪ್ರಕರಣಗಳನ್ನು ಆಧರಿಸಿ ಹೆಚ್ಚಿನ ಶಿಕ್ಷೆ ವಿಧಿಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣದ ಶಿಕ್ಷೆ ಪ್ರಮಾಣವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ನಿರ್ದೇಶನ ನೀಡಿತ್ತು. ಅದರನ್ವಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಇಬ್ಬರೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ.

Join Whatsapp