Home ಟಾಪ್ ಸುದ್ದಿಗಳು ಯುಪಿ ಸರ್ಕಾರ ಸಲಹೆಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ವಿರೋಧ

ಯುಪಿ ಸರ್ಕಾರ ಸಲಹೆಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ವಿರೋಧ

ದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿ ಆಹಾರ ಮಾರುವವರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಲು ಮುಜಾಫರ್ ನಗರದ ಪೊಲೀಸ್ ಸಲಹೆಗೆ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಚಿರಾಗ್ ಪಾಸ್ವಾನ್, ಪೊಲೀಸರ ಸಲಹೆಗೆ ನನ್ನ ಸಹಮತ ಇಲ್ಲ, “ಜಾತಿ ಅಥವಾ ಧರ್ಮದ ಹೆಸರಿನಲ್ಲಿ ವಿಭಜನೆಯನ್ನು” ಸೃಷ್ಟಿಸುವ ಯಾವುದನ್ನೂ ನಾನೂ ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.


ನೀವು ಸಲಹೆಯನ್ನು ಬೆಂಬಲಿಸುತ್ತೀರಾ ಎಂದು ಕೇಳಿದಾಗ, “ಇಲ್ಲ, ನಾನು ಇದನ್ನು ಬೆಂಬಲಿಸುವುದಿಲ್ಲ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ಸಮಾಜದಲ್ಲಿ ಶ್ರೀಮಂತರು ಮತ್ತು ಬಡವರು ಎಂಬ ಎರಡು ವರ್ಗದ ಜನರು ಇದ್ದಾರೆ. ವಿವಿಧ ಜಾತಿಗಳು ಮತ್ತು ಧರ್ಮಗಳ ವ್ಯಕ್ತಿಗಳು ಎರಡೂ ವರ್ಗಗಳಲ್ಲಿ ಇರುತ್ತಾರೆ. ನಾವು ಈ ಎರಡು ವರ್ಗದ ಜನರ ನಡುವಿನ ಅಂತರವನ್ನು ಕಡಿಮೆ ಮಾಡಬೇಕಾಗಿದೆ. ದಲಿತರು, ಹಿಂದುಳಿದವರು, ಮೇಲ್ಜಾತಿಗಳು ಮತ್ತು ಮುಸ್ಲಿಮರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಂಡಿರುವ ಬಡವರಿಗಾಗಿ ಕೆಲಸ ಮಾಡುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಿದೆ. ಎಲ್ಲರೂ ಇದ್ದಾರೆ. ಅವರಿಗಾಗಿ ನಾವು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

Join Whatsapp
Exit mobile version