ಲೋಕಸಭಾ ಚುನಾವಣೆಯಲ್ಲಿ ಎಲ್ ಜೆಪಿಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. ಇದರಿಂದಾಗಿ ಚಿರಾಗ್ ಪಾಸ್ವಾನ್ ಅವರು ರಾಮ್ ವಿಲಾಸ್ ಪಾಸ್ವಾನ್ ಅವರ ನೈಜ ಉತ್ತರಾಧಿಕಾರಿ ಎಂಬುದು ಸಾಬೀತಾದಂತಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗದಿದ್ದರೂ ಎನ್ಡಿಎ ಬಹುಮತದ ಗಡಿ ದಾಟಿದೆ.
2019ರ ಚುನಾವಣೆಯಲ್ಲಿ ಕೂಡಾ ರಾಮ್ವಿಲಾಸ್ ಪಾಸ್ವಾನ್ ನೇತೃತ್ವದಲ್ಲಿ ಎಲ್ಜೆಪಿ, ಎನ್ಡಿಎ ಸೀಟು ಹೊಂದಾಣಿಕೆಯಡಿ ಹಂಚಿಕೆಯಾಗಿದ್ದ ಎಲ್ಲಾ ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಎಲ್ಜೆಪಿ ಹಾಜಿಪುರ, ವೈಶಾಲಿ, ಸಮಷ್ಟಿಪುರ, ಖಗಾರಿಯಾ ಹಾಗೂ ಜಮುಯಿ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಬಿಹಾರದಲ್ಲಿ ಎನ್ಡಿಎ 40ರಲ್ಲಿ 30 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ 12 ಸ್ಥಾನಗಳು, ಜನತಾದಳ ಯುನೈಟೆಡ್ 12 ಸ್ಥಾನಗಳು, ಲೋಕ ಜನಶಕ್ತಿ ಪಕ್ಷ(ರಾಮ್ವಿಲಾಸ್ ಪಾಸ್ವಾನ್) 5 ಸ್ಥಾನಗಳನ್ನು ಪಡೆದಿದೆ ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ 1 ಸ್ಥಾನವನ್ನು ಪಡೆದುಕೊಂಡಿದೆ.