ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 5 ಕೋಟಿ ರೂ. ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ನಿನ್ನೆಯಿಂದ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ತಿವ್ರ ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆಯ ಎರಡನೇ ದಿನವಾದ ಇಂದು ಚೈತ್ರಾ ಅನಾರೋಗ್ಯದಿಂದ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ.
ಕೂಡಲೇ ಅವರನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.