ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ: ಆಸ್ಪತ್ರೆಗೆ ದಾಖಲು

Prasthutha|

- Advertisement -

ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 5 ಕೋಟಿ ರೂ. ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ನಿನ್ನೆಯಿಂದ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ತಿವ್ರ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆಯ ಎರಡನೇ ದಿನವಾದ ಇಂದು ಚೈತ್ರಾ ಅನಾರೋಗ್ಯದಿಂದ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ.

- Advertisement -

ಕೂಡಲೇ ಅವರನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp