ಚಿತ್ರದುರ್ಗ: ಸೇತುವೆಗೆ ಕಾರ್ ಡಿಕ್ಕಿ ಹೊಡೆದು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು

Prasthutha|

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಕಾರ್‌ನಲ್ಲಿದ್ದ ಮೂವರು ಪುಟ್ಟ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

- Advertisement -

ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.



Join Whatsapp