ಚಿತ್ತಾಪುರ: ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತ್ಯು

Prasthutha|

ಚಿತ್ತಾಪುರ: ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯಲ್ಲಿ ಸಂಭವಿಸಿದೆ.

- Advertisement -

ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಇದ್ದ 6 ಮಂದಿಯೂ ಮೃತಪಟ್ಟಿದ್ದಾರೆ.

ಮೃತರೆಲ್ಲ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮಸ್ಥರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp