ಕ್ರೈಸ್ತ ಮಿಷನರಿಗಳು ನಕ್ಸಲರಿಗಿಂತ ಅಪಾಯಕಾರಿ: ಬಿಜೆಪಿ ಸಂಸದೆ

Prasthutha: December 4, 2021

ನವದೆಹಲಿ: ಕ್ರೈಸ್ತರ ಪ್ರಾರ್ಥನಾ ಮಂದಿರಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ನಿರಂತರವಾಗಿ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದೆ ಗೋಮತಿ ಸಾಯಿ ಅವರು, ಕ್ರೈಸ್ತರ ವಿರುದ್ಧ ಅಪಮಾನಕರ ಹೇಳಿಕೆ ನೀಡಿದ್ದಾರೆ. ಮಿಷನರಿಗಳು ನಕ್ಸಲರಿಗಿಂತಲೂ ಅಪಾಯಕಾರಿ ಎಂದು ಬಿಜೆಪಿ ಸಂಸದೆ ಗೋಮತಿ ಸಾಯಿ ಹೇಳಿದ್ದಾರೆ.


ಲೋಕಸಭೆಯಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ಛತ್ತೀಸ್ ಗಢದಲ್ಲಿ ಧಾರ್ಮಿಕ ಮತಾಂತರ ವಿಚಾರ ಪ್ರಸ್ತಾಪಿಸಿದ ಅವರು, ”ಈ ವಿಚಾರವು ಕೇವಲ ಧರ್ಮ, ಮತಾಂತರಕ್ಕೆ ಸಂಬಂಧಿಸಿದ್ದಲ್ಲ. ಬದಲಿಗೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದು” ಎಂದು ಕಳವಳ ವ್ಯಕ್ತಪಡಿಸಿದರು.


‘ನಕ್ಸಲರು ಈಗ ಹಿಂದಡಿ ಇಟ್ಟಿದ್ದಾರೆ. ಆದರೆ ಕ್ರೈಸ್ತ ಮಿಷನರಿಗಳ ಹಾವಳಿ ಹೆಚ್ಚಾಗಿದೆ. ಆಮಿಷ ಮತ್ತು ಬಲವಂತದ ಮೂಲಕ ಮತಾಂತರ ಮಾಡಿ ಈ ಮಿಷನರಿಗಳು ನಕ್ಸಲರಿಗಿಂತಲೂ ಭಯಾನಕವಾಗಿ ತಯಾರಾಗಿದ್ದಾರೆ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸಂಸದೆಯ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!