ಕ್ರೈಸ್ತ ಸಂಘಟನೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೋ ಎಸ್ ಡಿಪಿಐ ಕಚೇರಿಗೆ ಭೇಟಿ: ಮುಂದಿನ ಹೋರಾಟದ ಬಗ್ಗೆ ಮಹತ್ವದ ಚರ್ಚೆ

Prasthutha: January 6, 2022

ಬೆಂಗಳೂರು: ಕರ್ನಾಟಕ ಕ್ರೈಸ್ತ ಸಂಘಟನೆಯ ಅಧ್ಯಕ್ಷ  ಮತ್ತು ಸಾಮಾಜಿಕ ಹೋರಾಟಗಾರ ಸ್ಟ್ಯಾನಿ ಪಿಂಟೊ ಅವರನ್ನು ಎಸ್ ಡಿಪಿಐ ಕಚೇರಿಗೆ ಆಹ್ವಾನಿಸಿ ಮುಂದಿನ ಹೋರಾಟದ ಬಗ್ಗೆ  ಚರ್ಚಿಸಲಾಯಿತು

ಎಸ್ ಡಿಪಿಐ ರಾಜ್ಯ ಕಚೇರಿಯಲ್ಲಿ ಸ್ಟ್ಯಾನಿ ಪಿಂಟೊ ಅವರೊಂದಿಗೆ ಪ್ರಸಕ್ತ ರಾಜ್ಯದಲ್ಲಿ ಹೆಚ್ಚುತ್ತಿರುವ ದಲಿತ, ಅಲ್ಪಸಂಖ್ಯಾತ ಹಾಗು ಹಿಂದುಳಿದ ವರ್ಗಗಳ ಮೇಲಿನ ನಿರಂತರ ದೌರ್ಜನ್ಯ, ದಬ್ಬಾಳಿಕೆಗಳು ಹಾಗು ಸಂವಿಧಾನ ವಿರೋಧಿ ಚಟುವಟಿಕೆಗಳ ಬಗ್ಗೆ ಸಂವಿಧಾನ ಪ್ರೇಮಿಗಳು, ಜೀವಪರರು, ಜಾತಿ ಮತ್ತು ವರ್ಗ ತಾರತಮ್ಯ ರಹಿತ ಸಮ ಸಮಾಜದ ಕನಸನ್ನು ಹೊತ್ತ ಎಲ್ಲ ಸಂಗಾತಿಗಳು ಒಟ್ಟಾಗಿ ಮುಂದಿನ ಹೋರಾಟವನ್ನು ರೂಪಿಸುವ ಬಗ್ಗೆ ರಚನಾತ್ಮಕ ಚರ್ಚೆ ನಡೆಯಿತು

ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಷ್ಟ್ರೀಯ ಕಾರ್ಯದರ್ಶಿ ಆಲ್ಫಾನ್ಸೊ ಫ್ರಾಂಕೊ, ರಾಜ್ಯ ಪ್ರಧಾನ ಕಾರ್ಯದರ್ಶಿ  ಅಫ್ಸರ್ ಕೊಡ್ಲಿಪೇಟೆ ಮತ್ತು ಜಿಲ್ಲಾಧ್ಯಕ್ಷರಾದ ಡಾ.ಮುಜಾಹಿದ್ ಪಾಷ ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!