Home ಟಾಪ್ ಸುದ್ದಿಗಳು ‘ಸಿಐಡಿ’ ಖ್ಯಾತಿಯ ನಟ ದಿನೇಶ್ ಫಡ್ನಿಸ್ ನಿಧನ

‘ಸಿಐಡಿ’ ಖ್ಯಾತಿಯ ನಟ ದಿನೇಶ್ ಫಡ್ನಿಸ್ ನಿಧನ

ಮುಂಬೈ: ಹಿಂದಿ ಜನಪ್ರಿಯ ಧಾರಾವಾಹಿ ಸಿಐಡಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮೂಲಕ ಸಿಐಡಿ ನಟ ಎಂದೇ ಖ್ಯಾತರಾಗಿದ್ದ ದಿನೇಶ್ ಫಡ್ನಿಸ್ ಅವರು ನಿಧನ ಹೊಂದಿದ್ದಾರೆ.

ಈ ಮಾಹಿತಿಯನ್ನು ಸಹ ನಟ ದಯಾನಂದ್ ಶೆಟ್ಟಿ ಅವರು ಖಚಿತ ಪಡಿಸಿದ್ದಾರೆ. ಡಿಸೆಂಬರ್ 1ರಂದು ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಹಲವಾರು ಟಿವಿ ಕಾರ್ಯಕ್ರಮದಲ್ಲಿ ದಿನೇಶ್ ಭಾಗಿಯಾಗಿದ್ದರೂ, ಹತ್ತಾರು ಧಾರಾವಾಹಿಗಳಲ್ಲಿ ನಟಿಸಿದ್ದರೂ, ಸಿಐಡಿ ಧಾರಾವಾಹಿ ಇವರಿಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು.

Join Whatsapp
Exit mobile version