PSI ನೇಮಕಾತಿಯಲ್ಲಿ ಅಕ್ರಮ: ಬಿಜೆಪಿ ನಾಯಕಿ ಮನೆಗೆ CID ತಂಡ ಭೇಟಿ

Prasthutha|

ಕಲಬುರಗಿ:  545 ಪಿಎಸ್ ​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮನೆಗೆ ಸಿಐಡಿ ತಂಡ ಭೇಟಿ ನೀಡಿದೆ.

- Advertisement -

ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್ಪಿ ಶಂಕರಗೌಡ ನೇತೃತ್ವದ ತಂಡ ಆಗಮಿಸಿದೆ.

ದಿವ್ಯಾ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಕೊಠಡಿ ಮೇಲ್ವಿಚಾರಕರು ಹಾಗೂ ಇದೇ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳನ್ನು ಸಿಐಡಿ ತಂಡ ಬಂಧಿಸಿದೆ. ಈ ಪ್ರಕರಣದಲ್ಲಿ ಇಲ್ಲಿವರಗೆ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ.



Join Whatsapp