ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಕೋರ್ಟ್ ಗೆ ಸಿಐಡಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದ ಸಿಐಡಿ, ಇದೀಗ ಎಫ್ಎಸ್ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
2023ರ ಜುಲೈ 18ರಂದು ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಘಟನೆ ನಡೆದಿತ್ತು. ಬಳಿಕ ಇದು ದೊಡ್ಡ ವಿವಾದವಾಗಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು.