ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಕೇಸ್: ಚಾರ್ಜ್​ ಶೀಟ್ ಸಲ್ಲಿಸಿದ ಸಿಐಡಿ

Prasthutha|

- Advertisement -

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಕೋರ್ಟ್​ ಗೆ ಸಿಐಡಿ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.

ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದ ಸಿಐಡಿ, ಇದೀಗ ಎಫ್​ಎಸ್​​ಎಲ್​ ವರದಿ ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.

- Advertisement -

2023ರ ಜುಲೈ 18ರಂದು ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಘಟನೆ ನಡೆದಿತ್ತು. ಬಳಿಕ ಇದು ದೊಡ್ಡ ವಿವಾದವಾಗಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು.

Join Whatsapp