ಚಂಡೀಗಢ: ರೈತರಿಗೆ ಅಗೌರವ ತೋರಿದ್ದಾರೆಂದು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಂಸದೆ ಕಂಗನಾ ರಣಾವತ್ ಅವರ ಕೆನ್ನೆಗೆ ಹೊಡೆದಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಪೇದೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಅಲ್ಲದೆ, ಆಕೆಯ ವಿರುದ್ಧ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಹಿಮಾಚಲದ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿರುವ ಕಂಗನಾ ರಣಾವತ್ ಚಂಡೀಗಡದಿಂದ ದೆಹಲಿಗೆ ತೆರಳುವ ವೇಳೆ ಚಂಡೀಗಢದ ಏರ್ ಪೋರ್ಟ್ ನಲ್ಲಿದ್ದ ಸಿಐಎಸ್ ಎಫ್ ನ ಮಹಿಳಾ ಸಿಬ್ಬಂದಿ ಸೇವೆ ಸಲ್ಲಿಸುತ್ತಿರುವಾಗಲೇ ಕಪಾಳಮೋಕ್ಷ ಮಾಡಿದ್ದಾರೆ.