Home ಟಾಪ್ ಸುದ್ದಿಗಳು ಮಾ. 19ರಂದು ಸಿಎಎ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ: ಸುಪ್ರೀಂಕೋರ್ಟ್

ಮಾ. 19ರಂದು ಸಿಎಎ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ: ಸುಪ್ರೀಂಕೋರ್ಟ್

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (CAA) 2019 ರ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಮಾರ್ಚ್ 19 ರಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.


ಈ ವಿಷಯವನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲಾಗುವುದು ಎಂದು ಸಿಜೆಐ ಹೇಳಿದ್ದಾರೆ. 2019 ರಿಂದ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾದ ಇನ್ನೂರಕ್ಕೂ ಹೆಚ್ಚು ಅರ್ಜಿಗಳು ಸಿಎಎ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿವೆ.

Join Whatsapp
Exit mobile version