ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಇಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

Prasthutha|

ತಿರುವನಂತಪುರಂ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇರಳದಲ್ಲಿ ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಪಾದಿಸಿದ್ದಾರೆ.

- Advertisement -

ಸರ್ಕಾರದ ಮೊದಲ ವಾರ್ಷಿಕೋತ್ಸವದ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದೆ. ಅದು ಹಾಗೇ ಮುಂದುವರಿಯುತ್ತದೆ” ಎಂದು ಹೇಳಿದರು.

ನಮ್ಮ ದೇಶವು ಭಾರತದ ಸಂವಿಧಾನದಲ್ಲಿ ಉಲ್ಲೇಖಿಸಿದಂತೆ ಜಾತ್ಯತೀತ ತತ್ವದ ಮೇಲೆ ಕೆಲಸ ಮಾಡುತ್ತಿದೆ ಎಂದು ಹೇಳಿದ ಮುಖ್ಯಮಂತ್ರಿಗಳು, ಇಂದಿನ ದಿನಗಳಲ್ಲಿ ಜಾತ್ಯತೀತತೆಯನ್ನು ನಾಶಮಾಡುವ ಪ್ರಯತ್ನಗಳು ನಡೆಯುತ್ತಿವೆ.ಇದಕ್ಕೆ ಒಂದು ನಿರ್ದಿಷ್ಟ ಗುಂಪಿನ ಜನರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಘಟನೆಯಲ್ಲಿ ಒಂದು ಗುಂಪು ಜನರು ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುತ್ತಿದ್ದಾರೆ. ಈ ಘಟನೆಯ ವಿರುದ್ಧ ಕೇರಳ ಸರ್ಕಾರವು ದೃಢವಾದ ನಿಲುವು ತೆಗೆದುಕೊಂಡಿದೆ ಎಂದು ತಿಳಿಸಿದರು.

Join Whatsapp