‘ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್’ನ ಬೆಳ್ಳಿ ಹಬ್ಬದ ಲೋಗೋ ಅನಾವರಣ: ರಾಜ್ಯೋತ್ಸವ ಪುರಸ್ಕೃತರಿಗೆ ಸನ್ಮಾನ

Prasthutha|

ಮಂಗಳೂರು: ಕಂಕನಾಡಿ ‘ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್’ನ 25ನೇ ವಾರ್ಷಿಕೋತ್ಸವದ (ಬೆಳ್ಳಿಹಬ್ಬ) ಲೋಗೊ ಅನಾವರಣ ಮತ್ತು ನ.26ರವರೆಗೆ ನಡೆಯುವ ಆ್ಯಂಟಿಕ್ ಫೆಸ್ಟ್ ಗೆ ಚಾಲನೆ ನೀಡಲಾಯಿತು.

- Advertisement -


ಈ ಸಂದರ್ಭ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಗುರುವಾರ ನಡೆಯಿತು. ಚಿತ್ರನಟ ಹಾಗು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಬೆಳ್ಳಿ ಹಬ್ಬದ ಲೋಗೋ ಅನಾವರಣಗೊಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ರಾಮಯ್ಯ ಮಾತನಾಡಿ ‘ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್’ನ ಸಮಾಜಮುಖಿ ಸೇವೆಯು ಶ್ಲಾಘನೀಯ. ವ್ಯಾಪಾರ-ವಹಿವಾಟಿನ ಮೂಲಕ ಕೇವಲ ಲಾಭದತ್ತ ಗಮನಹರಿಸದೆ ಸಮಾಜಸೇವೆ ಮಾಡುವವರನ್ನು ಗುರುತಿಸಿ ಸನ್ಮಾನಿಸುವುದು ಕೂಡ ಗೌರವದ ಕೆಲಸವಾಗಿದೆ ಎಂದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಾರ್ಮಾಡಿ ಹಸನಬ್ಬ, ಪುರಸ್ಕೃತ ಸಂಸ್ಥೆಯಾದ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಬ್ಯಾರಿ, ಹಿರಿಯ ಛಾಯಾಗ್ರಾಹಕ ರವಿ ಪೊಸವಣಿಕೆ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭ ಲಕ್ಕಿಡ್ರಾ ವಿಜೇತೆ ನಿರ್ಮಲಾ ಎಚ್.ಭಂಡಾರಿ ಅವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ‘ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್’ನ ಆಡಳಿತ ನಿರ್ದೇಶಕರಾದ ಮುಹಮ್ಮದ್ ದಿಲ್ಶಾದ್ ಮತ್ತು ನೌಶಾದ್ ಚೂರಿ, ಬ್ರಾಂಚ್ ಮ್ಯಾನೇಜರ್ ಅಹ್ಮದ್ ಹಫೀಝ್, ಮಾರ್ಕೆಟಿಂಗ್ ಮ್ಯಾನೇಜರ್ ಇಮ್ರಾನ್ ಉಪಸ್ಥಿತರಿದ್ದರು. ಮುಸ್ತಫಾ ಕಣ್ಣೂರು ಕಾರ್ಯಕ್ರಮ ನಿರೂಪಿಸಿದರು.