ಕರ್ತವ್ಯನಿರತ ಸಿವಿಲ್ ಡಿಫೆನ್ಸ್ ಅಧಿಕಾರಿ ಹೃದಯಾಘಾತದಿಂದ ನಿಧನ

Prasthutha|

ಬೆಂಗಳೂರು: ಸಿವಿಲ್ ಡಿಫೆನ್ಸ್ ವಿಭಾಗದ ಅಧಿಕಾರಿ ನಾಗೇಂದ್ರ ಅವರು ಬುಧವಾರ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

- Advertisement -

ಬೆಂಗಳೂರಿನಲ್ಲಿ ಮಳೆ ಹಾನಿ, ಬಿಲ್ಡಿಂಗ್‍ಗಳ ಕುಸಿತ, ಅಪಘಾತಗಳು ಸಂಭವಿಸಿದಾಗ ಹಾಗೂ ಮೂಕ ಪ್ರಾಣಿಗಳಿಗೆ ತೊಂದರೆಯಾದಾಗ ನಾಗೇಂದ್ರ ಅವರು ಸಹಾಯಕ್ಕೆ ನಿಲ್ಲುತ್ತಿದ್ದರು. ಜನರ ಸಂಕಷ್ಟವನ್ನು ಪರಿಹರಿಸಲು ಪ್ರಯತ್ನ ಪಡುತ್ತಿದ್ದರು.

ನಾಗೇಂದ್ರ ಅವರು ಕಚೇರಿಯಲ್ಲಿ ಕೆಲಸ ಮಾಡುವ ವೇಳೆ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp