ನಾನು ಅತ್ಯುತ್ತಮವಾದದ್ದನ್ನು ಮಾಡಿದ್ದೇನೆ ಎಂಬ ತೃಪ್ತಿಯಿದೆ : ಸಿಜೆಐ ಎಸ್.ಎ. ಬೋಬ್ಡೆ

Prasthutha: April 23, 2021

ನವದೆಹಲಿ: ಸಿಜೆಐ ಶರದ್ ಅರವಿಂದ್ ಬೋಬ್ಡೆ ಅವರು ಇಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತಾವು ಅತ್ಯುತ್ತಮವಾದದ್ದನ್ನೇ ಮಾಡಿದ್ದೇನೆ ಎಂಬ ತೃಪ್ತಿಯಿಂದ ಸಿಜೆಐ ಸ್ಥಾನದಿಂದ ಹೊರ ನಡೆಯುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನವೆಂಬರ್ 2019 ರಲ್ಲಿ ಭಾರತದ 47 ನೇ ಮುಖ್ಯನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ಎನ್.ಎ ಬೋಬ್ಡೆ, ಬಾಬರಿ ಮಸೀದಿ ತೀರ್ಪು ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ತೀರ್ಪು ನೀಡಿದ್ದರು.

“ಸೇವಾ ಅವಧಿಯ ಕೊನೆಯ ದಿನ ನನ್ನಲ್ಲಿ ವರ್ಣಿಸಲು ಸಾಧ್ಯಾವಾಗದಂತಹ ಭಾವನೆಗಳು ಮೂಡಿವೆ. ಹಲವು ಅದ್ಭುತ ನೆನಪುಗಳೊಂದಿಗೆ ಸುಪ್ರೀಂ ಕೋರ್ಟ್ ನಿಂದ ನಿರ್ಗಮಿಸುತ್ತಿದ್ದೇನೆ” ಎಂದು ನಿರ್ಗಮಿತ ಸಿಜೆಐ ಬೋಬ್ಡೆ ಹೇಳಿದ್ದಾರೆ.

 “ನನ್ನ ಜವಾಬ್ದಾರಿಯನ್ನು ಎನ್ ಬಿ ರಮಣ ಅವರಿಗೆ ವರ್ಗಾಯಿಸುತ್ತಿದ್ದು, ಅವರು 48ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಕೋರ್ಟನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಲಿದ್ದಾರೆ” ಎಂದು ಬೋಬ್ಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!