ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ: ಸ್ಥಳದಲ್ಲೇ ಮೃತ್ಯು

Prasthutha|

- Advertisement -

ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ನಡೆದಿದೆ.

ದುರ್ಗಾ ಕಿನ್ನಿ (60) ಕಾಡಾನೆ ಕಾಲ್ತುಳಿತಕ್ಕೆ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

- Advertisement -

ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆದಿದೆ. ಆನೆಯನ್ನು ಕಾಡಿಗಟ್ಟಲು ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಪಟಾಕಿ ಸಿಡಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳಿಯರು ಭೇಟಿ ನೀಡ್ತಿರೋದ್ರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಸ್ಥಳಕ್ಕೆ ಹಿರಿಯ ಅರಣ್ಯ ಹಿರಿಯ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆಯಲ್ಲಿ 2 ವರ್ಷದಲ್ಲಿ 6ಕ್ಕೂ ಹೆಚ್ಚು ಜನ ಆನೆ ದಾಳಿಗೆ ಬಲಿಯಾಗಿದ್ದಾರೆ.



Join Whatsapp