ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೊರಬರುವ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪನವರ ಕಾರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದಾಗ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ವಾಹನದಲ್ಲಿ ಕೂರಿಸಿ ಕರೆದೊಯ್ದರು.