ಬಿಜೆಪಿ ಕಚೇರಿ ಮುತ್ತಿಗೆಗೆ ರೈತರ ಯತ್ನ: ಪೊಲೀಸ್-ಅನ್ನದಾತರ ನಡುವೆ ಘರ್ಷಣೆ

Prasthutha|

ಜಲಂಧರ್: ಪಂಜಾಬ್ ನ ಜಲಂಧರ್ ನಲ್ಲಿ ಇಂದು ರೈತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು. ಈ ಹಿಂದೆ ಹರ್ಯಾಣದ ಕರ್ನಾಲ್ ನಲ್ಲಿ ರೈತರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ನಡೆದ ಘರ್ಷಣೆಯಲ್ಲಿ 10 ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದರು.

ಆಗಸ್ಟ್ 28 ರಂದು ಕರ್ನಾಲ್ ನಲ್ಲಿ ಬಿಜೆಪಿ ಕಾರ್ಯಕ್ರಮದ ಸಭೆಗೆ ನುಗ್ಗಲೆತ್ನಿಸಿದ ರೈತರನ್ನು ತಡೆಯಲು ಪೊಲೀಸರು ಜಲಫಿರಂಗಿ ಮತ್ತು ಲಾಠಿಚಾರ್ಜ್ ನಡೆಸಿದ ಪರಿಣಾಮ ಹಲವು ರೈತರು ತೀವ್ರ ರೀತಿಯಲ್ಲಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶಿಸಲಾಗಿದೆ.

- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೇಶಾದ್ಯಂತ ಸಾವಿರಾರು ರೈತರು ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದ ರೈತರು ಕಳೆದ ಒಂಬತ್ತು ತಿಂಗಳಿನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ರೈತರ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದು, ಯಾವುದೇ ಮಹತ್ವದ ನಿರ್ಧಾರ ಬರಲು ಸಾಧ್ಯವಾಗಿಲ್ಲ.

- Advertisement -