ಐಪಿಎಲ್ ನಲ್ಲಿ ಇಂದು ಬಲಿಷ್ಠ ತಂಡಗಳ ನಡುವೆ ಹಣಾಹಣಿ

Prasthutha|

ಅಬುದಾಬಿ : ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಏಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತ ನೈಟ್ ರೈಡರ್ಸ್ ಅಬುಧಾಬಿಯ ಶೇಖ್ ಝಾಯೆದ್ ಮೈದಾನದಲ್ಲಿ ಗುರುವಾರ ಮುಖಾಮುಖಿಯಾಗಲಿವೆ.
ಐಪಿಎಲ್’ನ ಟೂರ್ನಿಯ ಯುಎಇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಂಬೈ ಮುಗ್ಗರಿಸಿತ್ತು. ಆದರೆ ಅಂದಿನ ಪಂದ್ಯದಲ್ಲಿ ಗಾಯದ ಕಾರಣದಿಂದಾಗಿ ರೋಹಿತ್ ಶರ್ಮಾ ತಂಡದಿಂದ ಹೊರಗುಳಿದಿದ್ದರು. ಆದರೆ ಕೆಕೆಆರ್ ವಿರುದ್ಧದ ಇಂದಿನ ಪಂದ್ಯಕ್ಕೆ ರೋಹಿತ್ ತಂಡಕ್ಕೆ ಮರಳಲಿದ್ದು, ನಾಯಕತ್ವ ವಹಿಸಲಿದ್ದಾರೆ.

- Advertisement -


ರೋಹಿತ್ ಪುನರಾಗಮನದಿಂದ ಮುಂಬೈಗೆ ಹೆಚ್ಚಿನ ಬಲಬಂದಿದೆ. ಕೆಕೆಆರ್ ಎದುರಿನ ಪಂದ್ಯಕ್ಕೆ ರೋಹಿತ್ ಲಭ್ಯರಾಗುವುದು ಬಹುತೇಕ ಖಚಿತ’ಎಂದು ತಂಡದ ಕೋಚ್ ಮಹೇಲಾ ಜಯವರ್ಧನೆ ಹೇಳಿದ್ದಾರೆ.
ಮತ್ತೊಂದೆಡೆ, ಬಲಿಷ್ಠ ಆರ್ಸಿಬಿಗೆ ಹೀನಾಯ ಸೋಲುಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಮಾರ್ಗನ್ ಸಾರಥ್ಯದ ಕೆಕೆಆರ್ ಬ್ಯಾಟಿಂಗ್-ಬೌಲಿಂಗ್ ವಿಭಾಗಗಳೆರಡರಲ್ಲೂ ಸಮರ್ಥವಾಗಿದೆ. ಯುವ ಆಟಗಾರರಾದ ಶುಭಮನ್ ಗಿಲ್, ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಸೆಲ್, ಮಾರ್ಗನ್ ಒಳಗೊಂಡ ಬ್ಯಾಟಿಂಗ್ ಸರದಿ ಬಲಿಷ್ಠವಾಗಿದೆ. ಆರ್’ಸಿಬಿ ವಿರುದ್ಧದ ಜಯದ ಬಳಿಕ ಆತ್ಮವಿಶ್ವಾಸದಲ್ಲಿರುವ ಕೋಲ್ಕತ್ತ ತಂಡವು ಮುಂಬೈಗೆ ತೀವ್ರ ಪೈಪೋಟಿಯೊಡ್ಡುವ ನಿರೀಕ್ಷೆ ಇದೆ.
ಮೊದಲ ಪಂದ್ಯದಲ್ಲಿ ಸೌರಭ್ ತಿವಾರಿ ಉತ್ತಮವಾಗಿ ಆಡಿದ್ದರು. ಆದರೂ ಸಾಧಾರಣ ಗುರಿಯನ್ನು ಸಾಧಿಸುವಲ್ಲಿ ಮುಂಬೈ ಎಡವಿತ್ತು.


ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಕೆಕೆಆರ್ಗೆ ಇಂದಿನ ಪಂದ್ಯ ಗೆಲ್ಲಲೇಬೇಕಾಗಿದೆ. ಹೀಗಾಗಿ ರೋಚಕ ಹಣಾಹಣಿ ನಿರೀಕ್ಷಿಸಲಾಗಿದೆ.
ತಂಡಗಳು
ಕೋಲ್ಕತ್ತ ನೈಟ್ ರೈಡರ್ಸ್: ಏಯಾನ್ ಮಾರ್ಗನ್ (ನಾಯಕ), ಶುಭಮನ್ ಗಿಲ್, ದಿನೇಶ್ ಕಾರ್ತಿಕ್, ಗುರುಕೀರತ್ ಸಿಂಗ್ ಮಾನ್, ಕರುಣ್ ನಾಯರ್, ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಟಿ, ಹರಭಜನ್ ಸಿಂಗ್, ಕಮಲೇಶ್ ನಾಗರಕೋಟಿ, ಕುಲದೀಪ್ ಯಾದವ್, ಲಾಕಿ ಫರ್ಗ್ಯುಸನ್, ಎಂ. ಪ್ರಸಿದ್ಧ ಕೃಷ್ಣ, ಸಂದೀಪ್ ವಾರಿಯರ್, ಶಿವಂ ದುಬೆ, ಟಿಮ್ ಸೌಥಿ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಆ್ಯಂಡ್ರೆ ರಸೆಲ್, ಬೆನ್ ಕಟಿಂಗ್, ಶಕೀಬ್ ಅಲ್ ಹಸನ್, ಸುನೀಲ್ ನಾರಾಯಣ್, ಶೇಲ್ಡನ್ ಜಾಕ್ಸನ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಕ್ರಿಸ್ ಲಿನ್, ಸೌರಭ್ ತಿವಾರಿ, ಕೃಣಾಲ್ ಪಾಂಡ್ಯ, ಜೇಮ್ಸ್ ನಿಶಾಮ್, ಜಯಂತ್ ಯಾದವ್ ಕೀರನ್ ಪೊಲಾರ್ಡ್, ಮಾರ್ಕೊ ಜೆನ್ಸನ್, ಯದುವೀರ್ ಸಿಂಗ್, ಆ್ಯಡಂ ಮಿಲ್ನೆ, ಧವಳ್ ಕುಲಕರ್ಣಿ, ಜಸ್ಪ್ರೀತ್ ಬೂಮ್ರಾ, ಮೊಹಸಿನ್ ಖನ್, ನೇಥನ್ ಕೌಲ್ಟರ್ನೈಲ್, ಪಿಯೂಷ್ ಚಾವ್ಲಾ, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್.

- Advertisement -

ಸ್ಥಳ; ಶೇಖ್ ಝಾಯೆದ್ ಸ್ಟೇಡಿಯಂ, ಅಬುಧಾಬಿ.
ಪಂದ್ಯ ಆರಂಭ: ರಾತ್ರಿ 7.30
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್



Join Whatsapp