ಜೈಪುರ: ಎರಡು ಗುಂಪುಗಳ ನಡುವಿನ ಘರ್ಷಣೆನಡೆದು ಐದು ಮಂದಿ ಹತ್ಯೆಯಾಗಿರುವ ಘಟನೆ ರಾಜಸ್ಥಾನದ ಜಲಾವರ್ನಲ್ಲಿ ನಡೆದಿದೆ.
ಗೋವರ್ಧನ್ ಸಿಂಗ್, ಧೀರಜ್ ಸಿಂಗ್, ಭರತ್ ಸಿಂಗ್, ತೂಫಾನ್ ಸಿಂಗ್ ಮತ್ತು ಬಾಲು ಸಿಂಗ್ ಹತ್ಯೆಗೊಳಗಾದವರು.
ಜಲಾವರ್ನ ಪಗಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ವಿನಾಯಕ ಗ್ರಾಮದಲ್ಲಿ ಶನಿವಾರ ತಡರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಎದುರಾಳಿ ತಂಡದ ಸದಸ್ಯರು ಘರ್ಷಣೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೊರಟಿದ್ದಾರೆ. ಈ ವೇಳೆ ಕುಪಿತಗೊಂಡ ಆರೋಪಿಗಳು ಅವರ ಮೇಲೆ ಟಿಪ್ಪರ್ ಹತ್ತಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಘಟನೆ ನಡೆದ ಬಳಿಕ ಆರೋಪಿಗಳು ತಲೆಮಾರಿಸಿಕೊಂಡಿದ್ದು, ಇವರ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.