ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ನೌಕರರ ಮುಷ್ಕರವನ್ನು ನಿಲ್ಲಿಸಲು ಹಣ ಸ್ವೀಕರಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಬೆಂಬಲಿಗರು ಮತ್ತು ರೈತ ಮುಖಂಡ ಕೆ.ಚಂದ್ರಶೇಖರ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ.
ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರ ಮುಷ್ಕರ ನಿಲ್ಲಿಸಲು 35 ಕೋಟಿ ಡೀಲ್ ಮಾಡಿಕೊಂಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಸ್ಟಿಂಗ್ ಆಪರೇಷನ್ ಮಾಡಿತ್ತು. ಇಂದು ಪ್ರತಿಭಟನೆ ಮಾಡಿದ ಜೆಡಿಎಸ್ ಕಾರ್ಯಕರ್ತರು ಹಾಗೂ ಚಂದ್ರಶೇಖರ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ.