ಜನವರಿ 21 ರಿಂದ 1-9ನೇ ತರಗತಿ ಶಾಲೆಗಳು ಕೇರಳದಲ್ಲಿ ಬಂದ್ : ಮುಖ್ಯಮಂತ್ರಿ ಪಿಣರಾಯಿ ವಿಜಯನ್

Prasthutha: January 14, 2022

ಕೇರಳ: ಕೊರೋನಾ ಮತ್ತು ಒಮಿಕ್ರಾನ್ ಹೆಚ್ಚಳದ ಹಿನ್ನಲೆಯಲ್ಲಿ ಕೇರಳದಲ್ಲಿ ಜನವರಿ 21 ರಿಂದ ಒಂದರಿಂದ ಒಂಭತ್ತನೇ ತನಕದ ಶಾಲೆಗಳು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಅವಲೋಕನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.

21 ರಿಂದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಯಲಿದ್ದು, ಎರಡು ಫೆಬ್ರವರಿ ಎರಡನೇ ವಾರದ ತನಕ ಶಾಲೆಗಳನ್ನು ಮುಚ್ಚಲು ತೀರ್ಮಾನಿಸಲಾಗಿದ್ದು, ಬಳಿಕ ಕೋವಿಡ್ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ. ಆದರೆ 10 ರಿಂದ 12 ನೇ ತರಗತಿ ತನಕ ಎಂದಿನಂತೆ ತರಗತಿ ನಡೆಯಲಿದೆ.

ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ನಿಯಂತ್ರಣ ಸದ್ಯಕ್ಕೆ ಅಗತ್ಯ ಇಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದ್ದು, ಕೋವಿಡ್ ಹೆಚ್ಚಳದ ಹಿನ್ನಲೆಯಲ್ಲಿ ಕ್ಲಸ್ಟರ್ ಗಳನ್ನು ಗುರುತಿಸಿ ನಿಯಂತ್ರಣ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದರು ಸರಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಗರ್ಭಿಣಿಯರಿಗೆ ವರ್ಕ್ ಪ್ರಂ ಹೋಂ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!