ದೆಹಲಿಯಲ್ಲಿ ಮತ್ತೆ ಸಾಮೂಹಿಕ ಅತ್ಯಾಚಾರ: ಹತ್ತನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ‌ ಗ್ಯಾಂಗ್ ರೇಪ್

Prasthutha|

ನವದೆಹಲಿ: ಶಾಲೆಯಿಂದ 10ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾದ ದಾರುಣ ಘಟನೆ ವಸಂತ ವಿಹಾರ್‌ನ ಮಾರುಕಟ್ಟೆ ಸಮೀಪದಲ್ಲಿ ನಡೆದಿದೆ.

- Advertisement -

ನೈರುತ್ಯ ದೆಹಲಿಯ ಮಹಿಪಾಲ್‌ಪುರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಈ ಘಟನೆ ನಡೆದಿದ್ದು, ಅತ್ಯಾಚಾರ ಸಂತ್ರಸ್ತೆಯ ಸ್ನೇಹಿತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳೆಲ್ಲರೂ 20ರ ಆಸುಪಾಸಿನವರು
ಎಂದು ಪೊಲೀಸರು ತಿಳಿಸಿದ್ದಾರೆ

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯಿದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ವಸಂತ ವಿಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ (ನೈಋತ್ಯ) ಮನೋಜ್ ಸಿ ತಿಳಿಸಿದ್ದಾರೆ.

Join Whatsapp