ತಮಿಳುನಾಡು ಶಾಲಾ ಹಾಸ್ಟೆಲ್ ನಲ್ಲಿ 12ನೇ ತರಗತಿ ಬಾಲಕಿ ಶವವಾಗಿ ಪತ್ತೆ

Prasthutha|

ತಿರುವಳ್ಳೂರು: ಹಾಸ್ಟೆಲ್ ಕೊಠಡಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಸರ್ಕಾರಿ ಅನುದಾನಿತ ಶಾಲೆಯಲ್ಲಿ ನಡೆದಿದೆ

- Advertisement -

ಘಟನೆಯ ನಂತರ ಶಾಲಾ ಪ್ರದೇಶ ಮತ್ತು ಬಾಲಕಿಯರ ಗ್ರಾಮದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ವರದಿಗಳ ಪ್ರಕಾರ, ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.

- Advertisement -

ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಯಾವುದೇ ಸಾವಿನ ತನಿಖೆಯನ್ನು  ಕ್ರೈಮ್ ಬ್ರಾಂಚ್-ಕ್ರೈಮ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಬಿ-ಸಿಐಡಿ) ಗೆ ವಹಿಸಬೇಕು ಎಂಬ ಮದ್ರಾಸ್ ಹೈಕೋರ್ಟ್ ನ ತೀರ್ಪಿನ ಪ್ರಕಾರ ತನಿಖೆಯನ್ನು ಸಿಬಿ-ಸಿಐಡಿ  ಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ತೆಕ್ಕಲೂರಿನಲ್ಲಿ ರಸ್ತೆ ತಡೆ ನಡೆಸಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

Join Whatsapp