Home ಟಾಪ್ ಸುದ್ದಿಗಳು “ಕಾರಣ ಯಾರೆಂದು ಹೇಳಲು ಭಯವಾಗುತ್ತಿದೆ”: ಡೆತ್ ನೋಟ್ ಬರೆದಿಟ್ಟು ಬಾಲಕಿ ಆತ್ಮಹತ್ಯೆ!

“ಕಾರಣ ಯಾರೆಂದು ಹೇಳಲು ಭಯವಾಗುತ್ತಿದೆ”: ಡೆತ್ ನೋಟ್ ಬರೆದಿಟ್ಟು ಬಾಲಕಿ ಆತ್ಮಹತ್ಯೆ!

►ಲೈಂಗಿಕ ಶೋಷಣೆಗೆ ಒಳಗಾಗಿದ್ದ 17 ವರ್ಷದ ಬಾಲಕಿ

ಚೆನ್ನೈ: ತನ್ನ ಸಾವಿಗೆ ಕಾರಣ ಯಾರೆಂದು ಹೇಳಲು ಭಯವಾಗುತ್ತಿದೆ ಎಂದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ಕರೂರಿನಲ್ಲಿ ನಡೆದಿದೆ.


12ನೇ ತರಗತಿಯಲ್ಲಿ ಓದುತ್ತಿದ್ದ 17 ವರ್ಷ ಪ್ರಾಯದ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆಗೂ ಮೊದಲು ಬಾಲಕಿಯು ಡೆತ್ ನೋಟ್ ಬರೆದಿದ್ದು, “ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಕಿರುಕುಳದಿಂದ ಸಾಯುವ ಕೊನೆಯ ಹುಡುಗಿ ನಾನೇ ಆಗಿರಬೇಕು. ನನ್ನ ಈ ನಿರ್ಧಾರಕ್ಕೆ ಕಾರಣ ಯಾರು ಎಂದು ಹೇಳಲು ನನಗೆ ಭಯವಾಗುತ್ತಿದೆ. ನಾನು ಈ ಭೂಮಿಯಲ್ಲಿ ದೀರ್ಘಕಾಲ ಬದುಕಬೇಕು ಮತ್ತು ಇತರರಿಗೆ ಸಹಾಯ ಮಾಡಬೇಕೆಂದು ಬಯಸಿದ್ದೆ, ಆದರೆ ಈಗ ನಾನು ಇಷ್ಟು ಬೇಗ ಇಹಲೋಕ ತ್ಯಜಿಸುವಂತಾಗಿದೆ” ಎಂದು ಬರೆದಿದ್ದಾಳೆ.

ತಮಿಳುನಾಡಿನಲ್ಲಿ ಲೈಂಗಿಕ ಶೋಷಣೆಯ ಕಾರಣದಿಂದ ಇತ್ತೀಚೆಗೆ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಕಳೆದ ವಾರ ಕೊಯಮತ್ತೂರು ಜಿಲ್ಲೆಯಲ್ಲಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಶಾಲಾ ಶಿಕ್ಷಕರ ಲೈಂಗಿಕ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಳು.

Join Whatsapp
Exit mobile version