ಸುಳ್ಯ: ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಕ್ಕುಜಡ್ಕದ ಕುಂಟಿಕಾನದಲ್ಲಿ ನಡೆದಿದೆ.
ಕುಕ್ಕುಜಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್(7) ಮೃತ ಬಾಲಕ. ಬಾಲಕ ಮೋಕ್ಷಿತ್ ನಿಗೆ ಶಾಲೆಯಲ್ಲಿ ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು. ಈ ಬಗ್ಗೆ ಶಿಕ್ಷಕರು ಪೋಷಕರಿಗೆ ಮಾಹಿತಿ ನೀಡಿದ್ದು, ಬಾಲಕನ ತಂದೆ ಮಗನನ್ನು ಕರೆದುಕೊಂಡು ಹೋಗಲು ಶಾಲೆಗೆ ಬಂದಿದ್ದಾರೆ.
ಈ ವೇಳೆ ಕುಸಿದು ಬಿದ್ದ ಬಾಲಕನನ್ನು ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಬಾಲಕನಿಗೆ ಹೃದಯಾಘಾತವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.