5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ: ಇಂದು ಕೋರ್ಟ್ ತೀರ್ಪು

Prasthutha|

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಸಂಬಂಧವಾದ ತೀರ್ಪು ಇಂದು ಹೊರಬೀಳಲಿದೆ.

- Advertisement -

ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದರೆ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಈ ತೀರ್ಪನ್ನು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗಿಯ ನ್ಯಾಯಪೀಠ ಪ್ರಕಟಿಸಲಿದೆ.

ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ನ್ಯಾಯಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಆದರೆ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ್ಯಾಯಪೀಠ ಬಾಕಿ ಇರುವಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.

- Advertisement -

ನಿನ್ನೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ನೀಡಿದ ಸೂಚನೆಯಂತೆ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.

ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರನ್ನೊಳ್ಳಗೊಂಡ ನ್ಯಾಯಪೀಠ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಲಿದೆ.

Join Whatsapp