ಕಲಿತದ್ದು 8ನೇ ತರಗತಿ, IPS ಅಧಿಕಾರಿ ಎಂದು ನಂಬಿಸಿ ಲಕ್ಷ ಲಕ್ಷ ಹಣ ದೋಚಿದ ಖದೀಮ

Prasthutha|

ನವದೆಹಲಿ: 8ನೇ ತರಗತಿ ಶಾಲೆ ಕಲಿತು, ಐಪಿಎಸ್ ಅಧಿಕಾರಿ ಎಂದು ನಂಬಿಸಿ 12ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ ಮಾಡಿ ಲಕ್ಷಾಂತರ ಹಣ ದೋಚಿದ ಖದೀಮನನ್ನು ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.

- Advertisement -


ವಿಕಾಸ್ ಗೌತಮ್ ಬಂಧಿತ ಆರೋಪಿ. ಈತ ವಿಕಾಸ್ ಯಾದವ್ ಎಂಬ ಹೆಸರಿನಲ್ಲಿ ಟ್ವಿಟ್ಟರ್, ಇನ್ಸ್ಟಾಗ್ರಾಮ್ ನಕಲಿ ಖಾತೆಯನ್ನು ರಚಿಸಿದ್ದ. ಅಲ್ಲದೇ ಖಾತೆಯನ್ನು ಅಧಿಕೃತ ಎಂದು ತೊರಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದ. ತಾನು ಸರ್ಕಾರಿ ಅಧಿಕಾರಿ ಎಂದು ಹೇಳಲು ಸರ್ಕಾರಿ ಕಾರಿನ ಮುಂದೆ ನಿಂತು ಪೋಸ್ ನೀಡಿದ್ದ.
ಬಳಿಕ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯೆಯೊಬ್ಬಳು ಇತನಿಗೆ ಜಾಲತಾಣಗಳಲ್ಲಿ ಪರಿಚಯವಾಗಿದ್ದಳು. ಪ್ರತಿದಿನ ಅವಳೊಂದಿಗೆ ಚಾಟ್ ಮಾಡಿ, ಅವಳನ್ನು ತಾನು ಸರ್ಕಾರಿ ಅಧಿಕಾರಿ ಎಂದು ನಂಬಿಸಿದ್ದಾನೆ. ಅಲ್ಲದೆ ಆತ ವೈದ್ಯೆಯಿಂದ 25,000 ರೂ. ಯನ್ನು ಪಡೆದಿದ್ದಾನೆ. ಆದರೆ ವೈದ್ಯೆಗೆ ಈತ ಮೋಸ ಮಾಡುತ್ತಿದ್ದಾನೆ ಎಂದು ಸಂಶಯ ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯೆ ಪೊಲೀಸರ ಬಳಿ ಹೋಗಲು ನಿರ್ಧರಿಸಿದ್ದಾಳೆ. ಆದರೆ ವಿಕಾಸ್ ತನಗೆ ರಾಜಕೀಯ ನಾಯಕರ ಸಂಪರ್ಕವಿದೆ ಎಂದು ಬೆದರಿಕೆ ಹಾಕಿದ್ದಾನೆ. ಅದಕ್ಕೂ ಹೆದರದ ವೈದ್ಯೆ ಪೊಲೀಸರಿಗೆ ದೂರು ನೀಡಿದ್ದಾಳೆ.


ಮಹಿಳೆಯ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ವಿಕಾಸ್ ಇದೇ ರೀತಿ ಸುಳ್ಳು ಹೇಳಿಕೊಂಡು ಹತ್ತಾರು ಮಹಿಳೆಯರ ಬಳಿ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ವಿಕಾಸ್’ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಈತ 8ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೆಲ್ಡಿಂಗ್ ಕೋರ್ಸ್ ಮಾಡಿದ್ದ ಎಂದು ತಿಳಿದು ಬಂದಿದೆ.



Join Whatsapp